ಎ.27ರಂದು ಸಿಎಂ ಬಸವರಾಜ ಬೊಮ್ಮಾಯಿ ದ.ಕ. ಜಿಲ್ಲಾ ಪ್ರವಾಸ
Update: 2022-04-26 19:11 IST
ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎ.27ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಪೂ.11.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಮಧ್ಯಾಹ್ನ 12ಕ್ಕೆ ಮೂಡುಬಿದಿರೆಗೆ ತೆರಳಿ ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು.
12.30ಕ್ಕೆ ಜೈನ ಬಸದಿಗೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಮೂಡಬಿದಿರೆಯ ಪ್ರೆಸ್‌ಕ್ಲಬ್ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು.
ಅಪರಾಹ್ನ 3ರಿಂದ ಸಂಜೆ 5ರವರೆಗೆ ಮೂಡಬಿದಿರೆಯ ಆಡಳಿತ ಸೌಧದ ಮುಂಬಾಗದಲ್ಲಿ ಮುಲ್ಕಿ- ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ/ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯ ಪ್ರಕಟನೆ ತಿಳಿಸಿದೆ.