ಬೆಳ್ತಂಗಡಿ; ಆದಿವಾಸಿ ಮಹಿಳೆಗೆ ಹಲ್ಲೆ, ಮಾನಹಾನಿ ಪ್ರಕರಣ: ಮೂವರು ಆರೋಪಿಗಳ ಬಂಧನ
Update: 2022-04-26 20:39 IST
ಬೆಳ್ತಂಗಡಿ: ಉಜಿರೆ ಗುರಿಪಳ್ಳದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಆದಿವಾಸಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಮಾನಹಾನಿ ಮಾಡಿದ ಪ್ರಕರಣಕ್ಕೆಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಇವರಿಗೆ ಬೆಳ್ತಂಗಡಿ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಬಂಧಿತ ಆರೋಪಿಗಳು ಸುಗುಣ, ಕುಸುಮ ಹಾಗೂ ಲಲಿತ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಇವರಿಗೆ ಮಧ್ಯಂತರ ಜಾಮೀನು ನೀಡಿದೆ.