×
Ad

ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ಹೆಚ್ಚಳ

Update: 2022-04-26 21:59 IST

ಉಡುಪಿ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಹೆಚ್ಚಿಸಿದ್ದು, ೧ರಿಂದ ೪ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 1000  ರೂ., ೫ರಿಂದ ೮ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ೧೫೦೦ ರೂ., ೯ ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳಿಗೆ 2000 ರೂ., ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ೩೦೦೦ ರೂ., ಐಟಿಐ, ಪಾಲಿಟೆಕ್ನಿಕ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ೬೦೦೦ ರೂ., ಮತ್ತು ವೃತ್ತಿಪರ ಕೋರ್ಸ್‌ಗಳಾದ ಬಿ.ಇ, ಎಂಬಿಬಿಎಸ್ ಹಾಗೂ ಎಂಬಿಎ  ವಿದ್ಯಾರ್ಥಿಗಳಿಗೆ ೨೫,೦೦೦ರೂ. ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಬೀಡಿ ಕಾರ್ಮಿಕರ ಕಲ್ಯಾಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News