×
Ad

ಎ.29ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

Update: 2022-04-26 22:02 IST

ಉಡುಪಿ :  ಶಾಂತಾ ಎಲೆಕ್ಟ್ರಿಕಲ್ಸ್ ಮತ್ತು ಇಂಜಿನಿಯರ್ಸ್‌ ಪ್ರೈ.ಲಿ, ಶ್ರೀನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಕಂಪೆನಿ ಮತ್ತು ಕೋಟೆ ಮನೆ ಇಂಟರ್ ನ್ಯಾಷನಲ್ ಸ್ಕೂಲ್ ಇವರು ಎ.29ರಂದು ಬೆಳಗ್ಗೆ 9.45ರಿಂದ ಮಣಿಪಾಲದ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಿದ್ದಾರೆ.  

ಎಸೆಸೆಲ್ಸಿ, ಪಿಯುಸಿ, ಪದವಿ, ಐಟಿಐ ಡಿಪ್ಸೋಮಾ, ಬಿ.ಎ, ಬಿ.ಎಡ್, ಎನ್‌ಟಿಟಿ ಹಾಗೂ ಇತರೆ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ.೯೯೪೫೮೫೬೬೭೦, ೮೧೦೫೬೧೮೨೯೧ ಮತ್ತು ೮೧೯೭೪೪೦೧೫೫ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News