ದಿವ್ಯಾ ಹಾಗರಗಿ ಜೊತೆಗಿದ್ದ ಫೋಟೋ ವಿಚಾರ: ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2022-04-26 16:53 GMT

ಬೆಂಗಳೂರು, ಎ. 26: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೋಟಿಸ್ ನೀಡಿ ಕರೆದು, ತನಿಖೆ ಮಾಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಮಂಗಳವಾರ ಇಲ್ಲಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ, ಸಂತೋಷ. ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ ಹೇಳಿಕೊಂಡು ಹೋದರು, ಅಷ್ಟೇ’ ಎಂದು ಸ್ಪಷ್ಟಣೆ ನೀಡಿದರು.

‘ಬಿಜೆಪಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಮ್ಮ ವಿರುದ್ಧ ಮಾತನಾಡುತ್ತಿದ್ದಾರೆ. ಅವರು ನಮ್ಮ ಹೆಸರನ್ನು ಆಗಾಗ್ಗೆ ನೆನಪಿಸಿಕೊಳ್ಳುತ್ತಿರಬೇಕು, ನಮ್ಮ ಫೋಟೋ ಹಾಕಿಕೊಂಡು ಪ್ರಚಾರ ಮಾಡುತ್ತಿರಬೇಕು’ ಎಂದು ಶಿವಕುಮಾರ್ ಛೇಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News