×
Ad

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ: ಶಾಸಕ ರೇಣುಕಾಚಾರ್ಯಗೆ ಸಂಕಷ್ಟ

Update: 2022-04-26 23:58 IST

ಬೆಂಗಳೂರು, ಎ.26: ಬಿಜೆಪಿ ಶಾಸಕ ರೇಣುಕಾಚಾರ್ಯ ಅವರ ಪುತ್ರಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ದೂರು ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕ ಡಾ.ಪಿ.ರವೀಂದ್ರನಾಥ್ ತಿಳಿಸಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಪ್ರಕರಣದಲ್ಲಿ ಆರೋಪ ಸಾಬೀತಾದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರು, ಪ್ರಮಾಣಪತ್ರ ನೀಡಿದವರು ಹಾಗೂ ಇದಕ್ಕೆ ಸಹರಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News