×
Ad

ಮುಖ್ಯಮಂತ್ರಿ ಮಂಗಳೂರು ಭೇಟಿ ರದ್ದು, ಪ್ರಧಾನಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿ

Update: 2022-04-27 12:10 IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು, ಅವರು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‌ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬುದಾಗಿ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿದು ಬಂದಿತ್ತು. ಅಲ್ಲಿದಂಲೇ ಪ್ರಧಾನಿ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಇದೀಗ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಆರಂಭವಾಗಲಿದ್ದು, ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News