ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ

Update: 2022-04-27 13:55 GMT
ಅಮೃತ್ ಪೌಲ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ಪಿಎಸ್ ಐ ಹುದ್ದೆಯ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ನೇಮಕಾತಿ‌ ಮಂಡಳಿಯ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಅಮೃತ್ ಪಾಲ್ ಅವರನ್ನು ಬೆಂಗಳೂರು ಆಂತರಿಕ‌ ಭದ್ರತಾ ವಿಭಾಗಕ್ಕೆ ವರ್ಗಾವಣೆಗೊಳಿಸಿರುವ ಸರ್ಕಾರ, ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಹಿತೇಂದ್ರ ಅವರನ್ನು ನೇಮಕಮಾಡಿ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶಿಸಿದೆ. 

ಇನ್ನು ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ದಿವ್ಯಾ ಹಾಗರಗಿ ಸೇರಿ ಆರು ಜನ ಆರೋಪಿಗಳಿಗೆ ನ್ಯಾಯಾಲಯ ಮಂಗವಾರ ಬಂಧನ ವಾರೆಂಟ್ ಜಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News