×
Ad

ಮೂಡುಬಿದಿರೆ : ಅನ್ನದಾಸೋಹ ಕಟ್ಟಡ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

Update: 2022-04-27 16:09 IST

ಮಂಗಳೂರು: ಮೂಡುಬಿದಿರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅನ್ನ ದಾಸೋಹ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಉದ್ಘಾಟಿಸಿದರು.

ಈ ಸಂದರ್ಭ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಶಾಸಕರಾದ ಉಮಾನಾಥ್ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಎಕ್ಸಲೆಂಟ್ ಸಂಸ್ಥೆ ಸಿಬ್ಬಂದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News