ಹಿಂದಿ ಎಂದೆಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ: ಅಜಯ್ ದೇವಗನ್ ಗೆ ಸಿದ್ದರಾಮಯ್ಯ ತಿರುಗೇಟು

Update: 2022-04-27 17:33 GMT

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ವಿಚಾರಕ್ಕೆ ನಟ ಅಜಯ್‌ ದೇವಗನ್‌ ಮತ್ತು ನಟ ಸುದೀಪ್‌ ಮಧ್ಯೆ ಟ್ವಿಟರ್ ನಲ್ಲಿ ವಾಗ್ಯುದ್ಧ ನಡೆಯುತ್ತಿದೆ. ಈ ಸಂಬಂಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಜಯ್‌ ದೇವಗನ್‌ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. 

''ಹಿಂದಿ ಹಿಂದೆಯೂ ನಮ್ಮ ರಾಷ್ಟ್ರ ಭಾಷೆ ಆಗಿರಲಿಲ್ಲ. ಮುಂದೆಯೂ ಆಗುವುದಿಲ್ಲ ನಮ್ಮ ರಾಷ್ಟ್ರ ಭಾಷೆ ಆಗುವುದೂ ಇಲ್ಲ. ನಮ್ಮ ರಾಷ್ಟ್ರದ ಭಾಷಾ ವೈವಿಧ್ಯತೆಯನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಪ್ರತಿಯೊಂದು ಭಾಷೆಗೂ ತನ್ನದೇ ಆದ ಭವ್ಯ ಇತಿಹಾಸವಿದ್ದು, ಆ ಭಾಷೆಯ ಜನರಿಗೆ ಹೆಮ್ಮೆ ತರುವಂತಿದೆ. ನಾನು ಕನ್ನಡಿಗನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ''ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ನಟ ಸುದೀಪ್‌ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌, ಹಿಂದಿ ರಾಷ್ಟ್ರೆ ಭಾಷೆ ಆಗಿತ್ತು, ಮುಂದೆಯೂ ಆಗಿರುತ್ತದೆ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News