ರಾಜ್ಯದಲ್ಲಿ ಬುಧವಾರ 126 ಮಂದಿಗೆ ಕೊರೋನ ದೃಢ, ಸಾವಿನ ಸಂಖ್ಯೆ ಶೂನ್ಯ

Update: 2022-04-27 19:05 GMT

ಬೆಂಗಳೂರು, ಎ.27: ರಾಜ್ಯದಲ್ಲಿ ಬುಧವಾರ 126 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 99 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,47,209ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,057ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,713ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 126 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 114, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ಧಾರವಾಡ 1, ಕೋಲಾರ 1, ಮೈಸೂರು 2, ತುಮಕೂರು 1, ವಿಜಯಪುರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 114 ಜನರಿಗೆ ಕೊರೋನ ದೃಢ

ಬೆಂಗಳೂರು, ಎ.27: ರಾಜಧಾನಿಯಲ್ಲಿ ಬುಧವಾರದಂದು 114 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,64,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,83,195 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News