×
Ad

ದೊಡ್ಡಬಳ್ಳಾಪುರ: 6ನೇ ಮಹಡಿಯಿಂದ ಬಿದ್ದು ಉಗಾಂಡ ವಿದ್ಯಾರ್ಥಿನಿ ಮೃತ್ಯು, ಗೀತಂ ವಿವಿ ಕ್ಯಾಂಪಸ್ ಉದ್ವಿಗ್ನ

Update: 2022-04-28 11:35 IST

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ದೊಡ್ಡಬಳ್ಳಾಪುರದ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್‌ ಕ್ಯಾಂಪಸ್‌ನ 6ನೇ ಮಹಡಿಯಿಂದ ಬಿದ್ದು ಉಗಾಂಡಾ ಮೂಲದ 24 ವರ್ಷದ ಎಂಜಿನಿಯರಿಂಗ್‌ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು newindianexpress.com ವರದಿ ಮಾಡಿದೆ.

ಮೃತ ವಿದ್ಯಾರ್ಥಿನಿಯನ್ನು ಹಸೀನಾ ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ.

ಅಕ್ಕಪಕ್ಕದ ಕಟ್ಟಡದ ಮೇಲ್ಛಾವಣಿಯ ಮೇಲೆ ಬಿದ್ದಿದ್ದ ಬಟ್ಟೆಯನ್ನು ತೆಗೆಯಲು ಪ್ರಯತ್ನಿಸುತ್ತಿದ್ದಾಗ ವಿದ್ಯಾರ್ಥಿನಿ ಕಾಲು ಜಾರಿ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿ  6ನೇ ಮಹಡಿಯಿಂದ ಮೊದಲ ಮಹಡಿ ಮೇಲೆ ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ವಿದ್ಯಾರ್ಥಿನಿ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಶಂಕಿಸಿರುವ ವಿಶ್ವವಿದ್ಯಾಲಯದ ಕೆಲವು ವಿದ್ಯಾರ್ಥಿಗಳು ಹಾಸ್ಟೆಲ್ ಆವರಣದ ಗಾಜಿನ ಕಿಟಕಿಯ ಫಲಕಗಳು ಹಾಗೂ  ಇತರ ವಸ್ತುಗಳನ್ನು ಒಡೆದು ದಾಂಧಲೆ ಮಾಡಿದ್ದಾರೆ. ವಿದ್ಯಾರ್ಥಿಗಳ  ಮನವೊಲಿಕೆ ವಿಫಲವಾದ ನಂತರ ಯಾವುದೇ ಆಯ್ಕೆಯಿಲ್ಲದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಬೇಕಾಯಿತು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News