×
Ad

ʼಕಮಲೋತ್ಸವʼ ದೇಶದಲ್ಲಿಯೇ ವಿಶೇಷ ಕಾರ್ಯಕ್ರಮ : ಸಂಸದ ನಳಿನ್ ಕುಮಾರ್

Update: 2022-04-28 13:31 IST

ಗಂಜಿಮಠ, (ಒಡ್ಡೂರು ಫಾರ್ಮ್) : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಕಾರ್ಯಕರ್ತರ ವಿಶೇಷ ಸಮಾವೇಶ ಕಮಲೋತ್ಸವ ದೇಶದಲ್ಲಿಯೇ ವಿಶೇಷ ಕಾರ್ಯಕ್ರಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅವರು ಇಂದು ಗಂಜಿಮಠದ ಒಡ್ಡೂರು ಫಾರ್ಮ್ ನಲ್ಲಿ ಬಿಜೆಪಿಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಂಡಿದ್ದ  ಬಿಜೆಪಿಯ ಕಮಲೋತ್ಸವ  ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಜೇಶ್ ನಾಯ್ಕ್ ಬಂಟ್ವಾಳ ಶಾಸಕರಾದ ಬಳಿಕ ಕ್ಷೇತ್ರದ ಜನರ ವಿಶ್ವಾಸಗಳಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಗಲಭೆಗೆ, ನಿಷೇದಾಜ್ಞೆಗೆ ಅವಕಾಶ ನೀಡದೆ ಜನತೆಯ ನೆಮ್ಮದಿಗೆ ಕಾರಣಕರ್ತರಾಗಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 1500 ಕೋಟಿ ರೂ. ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನ ಮಾಡಿದ ಹೆಗ್ಗಳಿಕೆಗೆ ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಪಾತ್ರರಾಗಿದ್ದಾರೆ ಎಂದು ನಳಿನ್ ಕುಮಾರ್ ಶುಭ ಹಾರೈಸಿದರು.

ರಾಜ್ಯ ಬಂದರು, ಮೀನುಗಾರಿಕಾ ಸಚಿವ ಎಸ್.ಅಂಗಾರ  ಮಾತನಾಡುತ್ತಾ, ಕಾರ್ಯ ಕರ್ತರ ಸಂಘಟನೆಯ ದೃಷ್ಟಿಯಿಂದ ಮಹತ್ವದ ಕಾರ್ಯಕ್ರಮವಾಗಿದೆ ಎಂದು ಶುಭ ಹಾರೈಸಿದರು.

ಶಾಸಕ ಡಾ.ಭರತ್ ಶೆಟ್ಟಿ ಮಾತನಾಡುತ್ತಾ ಕಮಲೋತ್ಸವ ಬಿಜೆಪಿ ಕಾರ್ಯಕರ್ತರ ಕುಟುಂಬದ ಸದಸ್ಯರ ಸಮಾವೇಶ, ಅಭಿವೃದ್ಧಿ ಯ ಸಾಧನೆ ಯ  ಸಮಾವೇಶ ಇದಾಗಿದೆ ಎಂದು ತಿಳಿಸಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮಾಜಿ ಶಾಸಕರಾದ  ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ರವೀಂದ್ರ ಶೆಟ್ಟಿ ಉಳಿದೊಟ್ಟು, ಕಿಯೋನಿಸ್ಕ್  ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋಚನಾ ಭಟ್, ಬಿಜೆಪಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ದೇವಣ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ದೇವದಾಸ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News