ಮಾತೃಭಾಷೆಗಳೇ ಸಾರ್ವಭೌಮ: ಅಜಯ್ ದೇವಗನ್ 'ಹಿಂದಿ ರಾಷ್ಟ್ರೀಯ ಭಾಷೆ' ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-04-28 15:33 GMT

ಹುಬ್ಬಳ್ಳಿ, ಎ. 28: ‘ಮಾತೃಭಾಷೆಗಳೇ ಸಾರ್ವಭೌಮ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಟ ಅಜಯ್ ದೇವಗನ್ ಅವರ ಹಿಂದಿ ಹೇರಿಕೆ ಸಂಬಂಧದ ಹೇಳಿಕೆ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ಮಾತನಾಡಿದ ಅವರು, ‘ನಟ ಅಜಯ್ ದೇವಗನ್ ಟ್ವೀಟ್‍ಗೆ ನಟ ಕಿಚ್ಚ ಸುದೀಪ್ ಪ್ರತಿಯಾಗಿ ಟ್ವೀಟ್ ಮಾಡಿರುವುದು ಸರಿ ಇದೆ. ನಮ್ಮ ರಾಜ್ಯಗಳು ಭಾಷೆವಾರು ಪ್ರಾಂತ್ಯಗಳಾದ ಮೇಲೆ ಆ ರಾಜ್ಯಗಳಲ್ಲಿ ಮಾತೃಭಾಷೆಗಳಿಗೆ ಪ್ರಾಧ್ಯಾನ್ಯತೆ ಇದೆ. ಅದೇ ಸಾರ್ವಭೌಮ. ಇದನ್ನು ಎಲ್ಲರೂ ಮನಗಂಡು ಗೌರವಿಸಬೇಕು' ಎಂದು  ಹೇಳಿದರು.

ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ: ‘ಸುಪ್ರೀಂ ಕೋರ್ಟ್ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು. ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು' ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News