ಹುಬ್ಬಳ್ಳಿ ಗಲಭೆ ಪ್ರಕರಣ: ಆರೋಪಿ ವಾಸೀಂ ಪಠಾಣ್‍ಗೆ ಎ.30ರವರೆಗೆ ನ್ಯಾಯಾಂಗ ಬಂಧನ

Update: 2022-04-28 12:50 GMT

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎನ್ನಲಾಗಿರುವ ವಾಸೀಂ ಪಠಾಣ್ ಹಾಗೂ ಆತನ ಸಹಚರ ತೌಫಿಲ್ ಮುಲ್ಲಾನನ್ನು ಹುಬ್ಬಳ್ಳಿ 4ನೆ ಜೆಎಂಎಫ್‍ಸಿ ನ್ಯಾಯಾಲಯ ಎ.30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.   

ಈ ಹಿಂದೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಶಿರ್ ಹೊನ್ನಾಳ ಹಾಗೂ ಆರಿಫ್ ನಾಗರಾಳ ಎಂಬುವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.  ವಾಸೀಂ ಪಠಾಣ್‍ನನ್ನು ಧಾರವಾಡ ಕಾರಾಗೃಹದಲ್ಲಿ ಇರಿಸಲಾಗಿದೆ.

ಬಂಧಿತರ ಸಂಖ್ಯೆ 154ಕ್ಕೆ ಏರಿಕೆ: ಹಳೇ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಹುಡುಕಾಟ ಮುಂದುವರಿಸಿದ್ದು ಮತ್ತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆ ಮೂಲಕ ಬಂಧಿತರ ಸಂಖ್ಯೆ 154ಕ್ಕೆ ಏರಿದೆ.

ಬಂಧನಕ್ಕೆ ಒಳಗಾಗಿರುವ ಆರೋಪಿಗಳು ನೀಡುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಹಾವೇರಿ, ಗದಗ, ದಾಂಡೇಲಿಯಲ್ಲಿ ತಲೆಮರೆಸಿಕೊಂಡಿದ್ದ ಕೆಲವರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News