ಗ್ರಾ.ಪಂ.ಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಮೇ 20ಕ್ಕೆ ಉಪಚುನಾವಣೆ

Update: 2022-04-28 14:55 GMT
ಸಾಂದರ್ಭಿಕ ಚಿತ್ರ 

ಬೆಂಗಳೂರು, ಎ. 28: ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನ್ವಯ ಮೇ 20ಕ್ಕೆ ಮತದಾನ ನಡೆಸಲು ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಮೇ 5ಕ್ಕೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 10ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮೇ 11ಕ್ಕೆ ನಾಮಪತ್ರ ಪರಿಶೀಲನೆ, ಮೇ 13ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕಡೆಯದಿನ ಮೇ 20ರ ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆ ವರೆಗೆ ಮತದಾನ ನಡೆಯಲಿದೆ. ಮೇ 22ರ ಬೆಳಗ್ಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಮತ್ತು ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಮೇಲ್ಕಂಡ ದಿನಾಂಕದಲ್ಲೇ ಅವಧಿ ಮುಕ್ತಾಯವಾಗುವ 1 ಗ್ರಾ.ಪಂ., ನಾಮಪತ್ರ ಬಾರದೆ ಇರುವುದರಿಂದ ಚುನಾವಣೆ ನಡೆಯದೆ ಬಾಕಿ ಇದ್ದ 2 ಗ್ರಾ.ಪಂ. ಸೇರಿದಂತೆ ಮೂರು ಗ್ರಾ.ಪಂ ಹಾಗೂ ಖಾಲಿ ಉಳಿದಿರುವ 201 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ ಮೇ 5ರಿಂದ ಮೇ 22ರ ವರೆಗೆ ಚುನಾವಣಾ ನಡೆಯಲಿರುವ ಗ್ರಾ.ಪಂ.ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ಆಯೋಗ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News