×
Ad

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

Update: 2022-04-28 20:45 IST

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ತಮ್ಮ ಸಮುದಾಯದೊಳಗೆ ಅಂತರ್ಜಾತಿ ವಿವಾಹವಾದಲ್ಲಿ ಎರಡು ಲಕ್ಷ ರೂ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆಯನ್ನು ಇಲಾಖಾ ವೆಬ್‌ಸೈಟ್ - www.sw.kar.nic.in- ನಲ್ಲಿ ಸಲ್ಲಿಸಿ, ಸೂಕ್ತ ದಾಖಲೆಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ತಕ್ಷಣ ನೀಡಬೇಕೆಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ:೦೮೨೦-೨೫೭೪೮೯೨ನ್ನು ಸಂಪರ್ಕಿ ಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News