ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ: ಸಚಿವ ಮುರುಗೇಶ್ ನಿರಾಣಿ

Update: 2022-04-28 17:05 GMT

ಮೈಸೂರು,ಎ.28: ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ  ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ ಎಂದು ಒಪ್ಪಿಕೊಳ್ಳಬೇಕು, ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ. ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗ್ತಿವಿ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರುವುದರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷೆಗಳನ್ನೂ  ಪ್ರೀತಿಸುತ್ತೇನೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ್ ನಿರಾಣಿ, ಅದು ಸಿಎಂ ಬೊಮ್ಮಾಯಿಯವರ ಪರಮಾಧಿಕಾರ. ರಾಜ್ಯ ಬಿಜೆಪಿ ಅಧ್ಯಕ್ಷರು, ಕೇಂದ್ರದ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಈಗಾಗಲೇ ನಮಗೆ ಜವಾಬ್ದಾರಿ ನೀಡಿದ್ದಾರೆ. ಅದರಲ್ಲಿ ಉತ್ತಮವಾಗಿ ಕೆಲಸ ಮಾಡೋದು ನಮ್ಮ ಕೆಲಸ. ಸಂಪುಟ ವಿಸ್ತರಣೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಹೊಸಬರಿಗೆ ಸ್ಥಾನ ಕೊಡೊದರ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ. ಆಕಾಂಕ್ಷಿಗಳು  ಹೆಚ್ಚಾಗಿರೋದರಲ್ಲಿ ತಪ್ಪೇನಿಲ್ಲ ಎಂದರು.

ನಮ್ಮಲ್ಲಿ 121 ಜನ ಶಾಸಕರಿದ್ದಾರೆ, ಅದರಲ್ಲಿ ಹೆಚ್ಚಿನ ಜನಕ್ಕೆ ಮಂತ್ರಿಯಾಗುವ ಸಾಮರ್ಥ್ಯ ಇದೆ. ಜಿಲ್ಲಾವಾರು ಹಾಗೂ ಜಾತಿವಾರು ಅಳೆದು ತೂಗಿ ಸ್ಥಾನ ನೀಡುತ್ತಾರೆ. ಅದನ್ನ ನಡೆಸಿಕೊಂಡು ಹೋಗೋದು ನಮ್ಮ ಜವಾಬ್ದಾರಿ ಎಂದು ಮುರುಗೇಶ್ ನಿರಾಣಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News