ಆಂತರಿಕ ಭದ್ರತಾ ವಿಭಾಗಕ್ಕೆ ಕಳಂಕಿತ ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ: ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

Update: 2022-04-28 18:21 GMT

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಎಡಿಜಿಪಿ ಅಮೃತ್ ಪಾಲ್ ಅವರನ್ನು ಸೂಕ್ಷ್ಮ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಿದ ಸರ್ಕಾರದ ಕ್ರಮದ ವಿರುದ್ಧ ವಿಪಕ್ಷ ನಾಯ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. 

ಅಮೃತ್ ಪೌಲ್ ಅವರನ್ನು ನೇಮಕಾತಿ ವಿಭಾಗದಿಂದ ಆಂತರಿಕ ಭದ್ರತಾ ದಳದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದ್ದು, ಇನ್ನು ನೇಮಕಾತಿ ವಿಭಾಗದ ನೂತನ ಎಡಿಜಿಪಿ ಆಗಿ ಆರ್ ಹಿತೇಂದ್ರ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.

"ಕಳಂಕಿತ ಎಡಿಜಿಪಿ ಅಮೃತ್ ಪಾಲ್ ಅವರನ್ನು ಪ್ರಮುಖ ಮತ್ತು ಸೂಕ್ಷ್ಮ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸುವ ಮೂಲಕ ಬಹುಮಾನ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ಅವರೇ, ಇದು ಏನನ್ನು ಸೂಚಿಸುತ್ತದೆ?  ತನ್ನನ್ನು ಮತ್ತು ಕರ್ನಾಟಕ ಬಿಜೆಪಿ ನಾಯಕರ ರಹಸ್ಯಗಳು ಬಹಿರಂಗವಾಗದಂತೆ ರಕ್ಷಿಸಿಕೊಳ್ಳಲು ಅವರನ್ನು ಅಲ್ಲಿ ಪೋಸ್ಟ್ ಮಾಡಲಾಗಿದೆಯೇ? " ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಅಮೃತ್ ಪೌಲ್ ಅವರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ನೇಮಕಾತಿ ಹಗರಣದ ವಿಚಾರ ಇಟ್ಟುಕೊಂಡು ಕಾಂಗ್ರೆಸ್, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ನಡುವೆಯೇ ಅಮೃತ್ ಪೌಲ್ ರನ್ನು ವರ್ಗಾವಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News