×
Ad

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸಹಿತ ಐವರ ಬಂಧನ

Update: 2022-04-29 08:52 IST
ದಿವ್ಯಾ ಹಾಗರಗಿ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಈ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಬಂಧಿತರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಐಡಿ ಎಸ್‌ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದು, ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ವ್ಯಾಕವಾಗಿ ಕೇಳಿ ಬಂತು. ಒಬ್ಬ ಅಭ್ಯರ್ಥಿಯ ಒಎಂಆರ್‌ ಶೀಟ್‌ ಸಹ ಬಹಿರಂಗಗೊಂಡಿತ್ತು. ರಾಜ್ಯ ಸರ್ಕಾರ ಇದರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ಇಲ್ಲಿಯ ಚೌಕ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.

ಅಕ್ರಮ ಹಗರಣ ಬೆಳಕಿಗೆ ಬಂದು 18 ದಿನಗಳ ಬಳಿಕ ಇದೀಗ ಆರೋಪಿ ದಿವ್ಯಾ ಹಾಗರಗಿಯ ಬಂಧನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News