ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಆರೋಪ: ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರ ಬಂಧನ
Update: 2022-04-29 16:52 IST
ಮೈಸೂರು: ದಲಿತ ಹೋರಾಟಗಾರ ಬರಹಗಾರ ಹಾರೋಹಳ್ಳಿ ರವೀಂದ್ರ ಅವರನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.
ವರುಣಾ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಶುಕ್ರವಾರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಹಾರೋಹಳ್ಳಿ ರವೀಂದ್ರ 2017 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರೆಂಟ್ ಜಾರಿಯಾಗಿತ್ತು ಎಂದು ತಿಳಿದು ಬಂದಿದೆ.
ಈ ಸಂಬಂಧ ಚಿಕ್ಕೋಡಿ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ.