×
Ad

ಮೊನ್ನೆ ಜಿಗ್ನೇಶ್, ಇಂದು ಹಾರೋಹಳ್ಳಿ ರವೀಂದ್ರ...: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ

Update: 2022-04-29 17:15 IST

ಬೆಂಗಳೂರು: ಸಾಮಾಜಿಕ ಜಾಲ ತಾಣದಲ್ಲಿ ವಿವಾದಾದ್ಮಕ ಪೋಸ್ಟ್ ಹಾಕಿದ್ದಾರೆನ್ನಲಾದ ಆರೋಪಕ್ಕೆ ಸಂಬಂಧಿಸಿ ದಲಿತ ಹೋರಾಟಗಾರ ಹಾಗೂ ಬರಹಗಾರ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿರುವ ಕುರಿತು ವಿಧಾನ ಪತಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. 

'ಮೊನ್ನೆ ಜಿಗ್ನೇಶ್, ಇಂದು ಹಾರೋಹಳ್ಳಿ ರವೀಂದ್ರ..!  ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಕಾರಣಕ್ಕೆ ದಲಿತ ಪರ ಹೋರಾಟಗಾರರು, ಬರಹಗಾರರನ್ನ ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಶಿಸ್ಟ್ ನಡೆಯನ್ನ ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರರನ್ನ ಬಿಡುಗಡೆ ಮಾಡಬೇಕು' ಎಂದು ಬಿ.ಕೆ ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ  ಟ್ವೀಟಿಸಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಇತ್ತೀಚೆಗೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News