ಹು-ಧಾ ಪಾಲಿಕೆ ತೆರಿಗೆ ಹೆಚ್ಚಳ ನಿರ್ಧಾರ: ಕೋರ್ಟ್ ಮೆಟ್ಟಿಲೇರಿದ ವಾಣಿಜ್ಯೋದ್ಯಮ ಸಂಸ್ಥೆ

Update: 2022-04-29 12:47 GMT
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿ

ಬೆಂಗಳೂರು, ಎ.29: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿ ತೆರಿಗೆಯನ್ನು ಶೇ.37ರಿಂದ ಶೇ.900ರಷ್ಟು ಹೆಚ್ಚಳ ಮಾಡಿರುವುದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. 

ಹು-ಧಾ ಮಹಾನಗರ ಪಾಲಿಕೆಯು ಆಸ್ತಿ ತೆರಿಗೆಯನ್ನು ಶೇ.37ರಿಂದ ಶೇ.900ರಷ್ಟು ಹೆಚ್ಚಳ ಮಾಡಿದ್ದು, ಇದು ಸಂಪೂರ್ಣ ಅವೈಜ್ಞಾನಿಕ ಹಾಗೂ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ಚೇಂಬರ್ ಆಫ್ ಕಾಮರ್ಸ್ ಸಂಸ್ಥೆಯು ಅರ್ಜಿಯಲ್ಲಿ ಉಲ್ಲೇಖಿಸಿದೆ. 

ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಮಹೇಂದ್ರ ಲದ್ದಡ ಹಾಗೂ ಈಗಿನ ಅಧ್ಯಕ್ಷ ವಿನಯ ಜವಳಿ ಈಗಾಗಲೇ ತಮ್ಮ ತಕರಾರು ದಾಖಲಿಸಿ, ಹೆಚ್ಚಳ ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಸರಕಾರಕ್ಕೆ ಪದೇ ಪದೇ ಮನವಿ ಮಾಡಿದ್ದಾರೆ. ಅಲ್ಲದೇ ಆಂತರಿಕ ಸಭೆಗಳಲ್ಲಿ ತಮ್ಮ ಬೇಸರವನ್ನು ಹೊರಹಾಕಿದ್ದೂ ಉಂಟು. ಆದರೆ ಸರಕಾರಕ್ಕೆ ಅವೈಜ್ಞಾನಿಕ ಆಸ್ತಿ ತೆರಿಗೆ ಕುರಿತು ಮನವರಿಕೆ ಕೆಲಸ ಮಾಡಿದರೂ ವಿಫಲವಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News