ರಾಜ್ಯದಲ್ಲಿ ಶುಕ್ರವಾರ 133 ಮಂದಿಗೆ ಕೊರೋನ ದೃಢ, ಸಾವಿನ ಸಂಖ್ಯೆ ಶೂನ್ಯ

Update: 2022-04-29 16:04 GMT

ಬೆಂಗಳೂರು, ಎ.29: ರಾಜ್ಯದಲ್ಲಿ ಶುಕ್ರವಾರ 133 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 147 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,47,496ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,057ಕ್ಕೆ ತಲುಪಿದೆ.     
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,737ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 133 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 127, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಧಾರವಾಡ 1, ಹಾಸನ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 127 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 127 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,64,834 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,83,464 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News