ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಇತಿಹಾಸ ನಿರ್ಮಿಸಲಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Update: 2022-04-29 16:42 GMT

ಬೆಂಗಳೂರು, ಎ. 29: ದೇಶಾದ್ಯಂತ ಕ್ರೀಡೆಯನ್ನು ಉತ್ತೇಜಿಸುವುದು ಹಾಗೂ ಖೇಲೋ ಇಂಡಿಯಾ ವಾರ್ಷಿಕ ಕ್ರೀಡೆಗಳು ಮತ್ತು ಸ್ಪರ್ಧೆಗಳಲ್ಲಿ ಯುವಕರ ಸಾಮೂಹಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ ಖೋಲೋ ಇಂಡಿಯಾ ಯೂನಿವರ್ಸಿಟಿ ಮುಖಾಂತರ ಖೋಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ ಎಂದು ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಇಂದು ಕನಕಪುರದ ಜೈನ್ ಕಾಲೇಜು ಆವರಣದಲ್ಲಿ ನಡೆದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಗೆ ರಾಜ್ಯಪಾಲರು ಸಾಕ್ಷಿಯಾದರು. ಕಬಡಿ ಪಂದ್ಯಾವಳಿ, ಯೋಗಾಸನ, ಫೆನ್ಸಿಂಗ್ ಗೇಮ್ ವೀಕ್ಷೀಸಿ, ವಿಜೇತರಿಗೆ ಪದಕಗಳನ್ನು ವಿತರಿಸಿದರು. 

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ರ 2 ನೇ ಆವೃತ್ತಿಯನ್ನು ಕರ್ನಾಟಕ ರಾಜ್ಯಕ್ಕೆ ಆಯೋಜಿಸುವ ಅವಕಾಶ ಸಿಕ್ಕಿದೆ. ಈ ಕಾರ್ಯಕ್ರಮದ ಮುಖಾಂತರ ಕ್ರೀಡೆಗೆ ಜನರು ಹೆಚ್ಚು ಒತ್ತು ನೀಡುವುದರ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಲಿದ್ದಾರೆ. ಈ ಗೇಮ್ಸ್‍ನಿಂದಾಗಿ ಭಾರತದಲ್ಲಿ ಇತಿಹಾಸದಲ್ಲಿ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಒಲಿಂಪಿಕ್ ಕ್ರೀಡಾಕೂಟದಲ್ಲಿಭಾರತ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹೆಚ್ಚಿನ ಪದಕ ಗಳಿಸಿದೆ. ವಿಶೇಷವಾಗಿ ದಿವ್ಯಾಂಗರು ಪ್ಯಾರಾಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡುವ ಮೂಲಕ, ಭಾರತೀಯ ಪ್ಯಾರಾ ಕ್ರೀಡಾಪಟುಗಳು ಈ ಬಾರಿ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ 19 ಪದಕಗಳನ್ನು ಗೆದ್ದಿದ್ದಾರೆ. ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಅತಿದೊಡ್ಡ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಯಾಗಿದೆ ಎಂದು ಹೇಳಿದರು.

ಸಚಿವರಾದ ಕೆ.ಸಿ.ನಾರಾಯಣಗೌಡ, ಶಾಲಿನಿ ರಜನೀಶ್, ಜೈನ್ ವಿಶ್ವವಿದ್ಯಾಲಯದ ಸಂಸ್ಥಾಪಕ ಚೆನ್ರಾಜ್ ರಾಯ್ಚಂದ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News