ವಿಷ ಸೇವಿಸಿ ಯುವಕ ಆತ್ಮಹತ್ಯೆ
Update: 2022-04-29 22:36 IST
ಮಣಿಪಾಲ : ಯುವಕನೊಬ್ಬ ವಿಷ ಸೇವಿಸಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.
ರಜತ್ (19) ಸುಮಾರು ಎಂಟು ತಿಂಗಳಿನಿಂದ ಮಣಿಪಾಲದ ಹೊಟೇಲ್‌ನಲ್ಲಿ ಕೆಲಸ ಮಾಡುತಿದ್ದು, ಎ.18ರಂದು ವಿಷ ಸೇವಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದ ರಜತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಠಾಣೆಯಲಿ ಪ್ರಕರಣ ದಾಖಲಾಗಿದೆ.