ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಮುಖಂಡನಿಂದಲೇ ಪ್ರಧಾನಿ ಕಚೇರಿಗೆ ದೂರು!

Update: 2022-04-30 06:45 GMT
ರಾಘವ್ ಅಣ್ಣಿಗೇರಿ -  ಬಿಜೆಪಿ ಮುಖಂಡ

ವಿಜಯಪುರ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಎಂದೇ ಹೇಳಲಾಗುತ್ತಿರುವ ದಿವ್ಯಾ ಹಾಗರಗಿ ಬಂಧನದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರು ಪಿಎಸ್ಐ ಅಕ್ರಮ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಪ್ರಧಾನಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ವಿಜಯಪುರದ ಸ್ವಾಮಿ ವಿವೇಕಾನಂದ ಸೇನೆ ಅದ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಪ್ತ ಎನ್ನಲಾದ ರಾಘವ್ ಅಣ್ಣಿಗೇರಿ ಪ್ರಧಾನಿ ಕಚೇರಿಗೆ ಆನ್ ಲೈನ್ ಮೂಲಕ ದೂರು ನೀಡಿದ್ದಾರೆ. 

'ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದ್ದು, ಜನರು ರೋಸಿ ಹೋಗಿದ್ದಾರೆ. ಪೊಲೀಸ್ ಇಲಾಖೆ ಮಾತ್ರವಲ್ಲದೆ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹಲವು ದೂರುಗಳು ಕೇಳಿ ಬಂದಿವೆ. ಹೀಗಾಗಿ ಇವುಗಳ ಬಗ್ಗೆಯೂ ತನಿಖೆ ಮಾಡಬೇಕು' ಎಂದು ರಾಘವ್ ಅಣ್ಣೀಗೇರಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News