ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ: ಐಪಿಎಸ್ ಅಧಿಕಾರಿ ಡಿ.ರೂಪಾ

Update: 2022-04-30 09:24 GMT
 ಐಪಿಎಸ್ ಅಧಿಕಾರಿ ಡಿ.ರೂಪಾ

ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬೆನ್ನಲ್ಲೇ 545 ಪಿಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಹಿತಿ ನೀಡಿದ್ದರು. ಇದೀಗ ರಾಜ್ಯ ಸರಕಾರದ ಈ ನಿರ್ಧಾರದ ಕುರಿತು  ಐಪಿಎಸ್ ಅಧಿಕಾರಿ ಡಿ.ರೂಪಾ ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, '' PSI ನೇಮಕಾತಿ ಮರುಪರೀಕ್ಷೆ ನಿರ್ಧಾರದ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ. ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು suspension ಮುಂತಾದ ಶಿಸ್ತು ಕ್ರಮ(ಟ್ರಾನ್ಸ್ಫರ್ ಶಿಸ್ತುಕ್ರಮ ಅಲ್ಲ) ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ'' ಎಂದು ಹೇಳಿದ್ದಾರೆ.

ಇನ್ನು ಸರಕಾರದ ಈ ನಿರ್ಧಾರದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಟೀಕಿಸಿದ್ದಾರೆ. 

'ಪಿಎಸ್ಸೈ ನೇಮಕಾತಿ ವಿಚಾರದಲ್ಲಿ ಅಕ್ರಮ ಸಂಬಂಧ ಮರು ಪರೀಕ್ಷೆಯ ಸರಕಾರದ ನಿರ್ಧಾರದಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News