ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

Update: 2022-04-30 13:05 GMT

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನ ಅಧಿಕೃತ ವೆಬ್‌ಸೈಟ್‌ http://pue.kar.nic.in/ ನಲ್ಲಿ ಪರಿಶೀಲಿಸಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್‌ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಮಾಹಿತಿ ಅಗತ್ಯವಾಗಿದೆ.

 ರಾಜ್ಯದಾದ್ಯಂತ ಈಗಾಗಲೇ ಎಪ್ರಿಲ್‌ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಕೂಡ ಆರಂಭವಾಗಿದ್ದು, ಸುಮಾರು ಆರು ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು 1076 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಈ ಪರೀಕ್ಷೆಯ ಫಲಿತಾಂಶ ಜೂನ್‌ನಲ್ಲಿ ಬಿಡುಗಡೆ ಆಗಲಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News