ಬಜರಂಗದಳ ಕಾರ್ಯಕರ್ತರು ಸುದ್ದಿಗೆ ಬರಲು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Update: 2022-04-30 14:43 GMT

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದಲ್ಲಿ ಸಾಕಿದ ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು,  ಬಜರಂಗ ದಳದ ಕಾರ್ಯಕರ್ತರು ಮಹಿಳೆ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿರುವ ವರದಿಗಳನ್ನು ಕೇಳಿ ಅತೀವ ಬೇಸರವಾಗಿದೆ. ಬಜರಂಗದಳದ ಕಾರ್ಯಕರ್ತರು ರಣಹದ್ದುಗಳ ರೀತಿ ವರ್ತಿಸುತ್ತಿದ್ದಾರೆ. ಸುದ್ದಿಗೆ ಬರಲು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ. 

''ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮಿನಾಮೇಷ ಎಣಿಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಪೊಲಿಸರು ಸಾಮಾನ್ಯ ಜನರ ಪರ ಕೆಲಸ ಮಾಡುತ್ತಿದ್ದಾರಾ? ಅಥವಾ ಬಿಜೆಪಿ ಮತ್ತು ಅವರ ಗೂಂಡಾಗಳಿಗಾಗಿ ಕೆಲಸ ಮಾಡುತ್ತಿದ್ದಾರಾ?'' ಎಂದು ಪ್ರಶ್ನೆ ಮಾಡಿದ್ದರೆ.  

ಮೇಯಲು ಕಟ್ಟಿದ್ದ ಹೆಣ್ಣು ಕರುವನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಬಿಜೆಪಿ ಮತ್ತು ಬಜರಂಗದಳದವರು ಎನ್ನಲಾದ ತಂಡವೊಂದು ಮೂರು ದಿನಗಳ ಹಿಂದೆ ತನಗೆ ಹಾಗೂ ತನ್ನ ಕೆಲಸದವನ ಮೇಲೆ ಹಲ್ಲೆ ನಡೆಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ  ನೆಲ್ಯಾಡಿಯ ಮಣ್ಣಗುಂಡಿ ನಿವಾಸಿ ಮಹಿಳೆಯೊಬ್ಬರು ಅಳಲು ತೋಡಿಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News