×
Ad

ರಾಗಿ ಖರೀದಿಗೆ ಕೇಂದ್ರ ಸರಕಾರದ ಒಪ್ಪಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-04-30 20:55 IST
ಮುಖ್ಯಮಂತ್ರಿಗಳ ಹಾಗೂ ಸಿಜೆಗಳ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ

ಹೊಸದಿಲ್ಲಿ, ಎ.30: ಮೂರು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಸರಕಾರದ ಒಪ್ಪಿಗೆ ನೀಡಿದೆ. ಈ ಮೂಲಕ ರಾಗಿ ಬೆಳೆಗಾರರ ದೊಡ್ಡ ಸಂಕಷ್ಟ ಬಗೆಹರಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಶನಿವಾರ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿಗಳ ಹಾಗೂ ಸಿಜೆಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ಐದಾರು ಜಿಲ್ಲೆಗಳಲ್ಲಿ ರಾಗಿ ಬೆಳೆದ ರೈತರಿಗೆ ಬೆಲೆ ಸಿಗಬೇಕೆಂಬ ಕಾರಣದಿಂದ ಮೊದಲು 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಯಿತು. ಪುನಹ ಬೇಡಿಕೆ ಬಂದ ಹಿನ್ನೆಲೆಯಲ್ಲಿ 485 ಕೋಟಿ ರೂ.ಗಳನ್ನು ಮಂಜೂರು ಮಾಡಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಯಿತು ಎಂದರು.  

ರಾಗಿ ಹೆಚ್ಚು ಬೆಳೆದ್ದದ್ದರಿಂದ ಖರೀದಿಗೆ ರೈತರ ಒತ್ತಾಸೆಯ ಮೇರೆಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರ ಸರಕಾರ ಒಪ್ಪಿಗೆ ನೀಡಿರುವುದರಿಂದ ರಾಗಿ ಖರೀದಿಯನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News