×
Ad

ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಭದ್ರತೆ ಕೈಗೊಳ್ಳುವ ಬಗ್ಗೆ ಸಭೆ

Update: 2022-04-30 21:31 IST

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯಾವುದೇ ಅಪಘಡ ಸಂಭವಿಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಟೂರಿಸ್ಟ್ ಬೋಟ್ ಮಾಲಕರು ಹಾಗೂ ಮಲ್ಪೆ ಬೀಚ್ ನಿರ್ವಾಹಕರೊಂದಿಗೆ ಇಂದು ಉಡುಪಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ವಿಶೇಷ ಸಭೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದ ರೀತಿಯಲ್ಲಿ ಸೂಕ್ತ ಭದ್ರತೆ ಕ್ರಮ ಕೈಗೊಳ್ಳುವ ಬಗ್ಗೆ ಸೂಚಿಸಲಾಯಿತು.

ಸಭೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶ್ವಂತ್ ಪ್ರಭು ಹಾಗೂ ಟೂರಿಸ್ಟ್ ಬೋಟ್ ಮಾಲಕರು ಹಾಗೂ ಮಲ್ಪೆ ಬೀಚ್ ನಿರ್ವಾಹಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News