ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ ಮರುದಿನವೇ ಶವವಾಗಿ ಪತ್ತೆಯಾದ ಯುವತಿ: ಅತ್ಯಾಚಾರದ ಆರೋಪ

Update: 2022-04-30 18:11 GMT
Photo: Twitter/ndtv

ಲಖ್ನೋ: ಉತ್ತರ ಪ್ರದೇಶದ ಉನ್ನಾವೊದ ನರ್ಸಿಂಗ್ ಹೋಂ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಎಂದು ಪೋಷಕರು ಆರೋಪಿಸಿದ್ದಾರೆ. ಘಟನೆಯ ಎಫ್‌ಐಆರ್ ದಾಖಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ದೂರು ನೀಡಲಾಗಿದೆ.

"ನ್ಯೂ ಜೀವನ್ ಆಸ್ಪತ್ರೆಯ ಆವರಣದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ, ಸಾವಿನ ಕಾರಣಗಳನ್ನು ತಿಳಿಯಲು ಮರಣೋತ್ತರ ಪರೀಕ್ಷೆಗೆ ಆದೇಶಿಸಲಾಗಿದೆ. ಯುವತಿಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು'' ಎಂದು ಉನ್ನಾವ್‌ ನ ಹೆಚ್ಚುವರಿ ಎಸ್ಪಿ ಶಶಿ ಶೇಖರ್ ಸಿಂಗ್ ಹೇಳಿದ್ದಾರೆ.

ವರದಿಗಳ ಪ್ರಕಾರ, ಮೃತ ಯುವತಿ ನರ್ಸ್ ಆಗಿದ್ದು, ಶುಕ್ರವಾರ ಆಕೆಯ ಮೊದಲ ಕೆಲಸದ ದಿನವಾಗಿತ್ತು. ಆದರೆ, ಮರುದಿನವೇ  ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News