×
Ad

ಬಿಹಾರ: ಅನೈತಿಕ ಸಂಬಂಧದ ಆರೋಪ, ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ ಪತಿ

Update: 2022-05-01 12:24 IST
ಸಾಂದರ್ಭಿಕ ಚಿತ್ರ, Photo: outlook.

ಬಿಲಾಸ್‌ಪುರ: ಗ್ರಾಮದಲ್ಲಿ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೊಪಿಸಿದ ಪತಿ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಮಹಿಳೆಯ ಪತಿ ದೀಪಕ್ ರಾಮ್ ಶುಕ್ರವಾರ ಪೊಲೀಸರನ್ನು ಸಂಪರ್ಕಿಸಿದ್ದು, ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೇಳಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಮಕ್ಕಳಿರುವ ದಂಪತಿಯನ್ನು ಠಾಣೆಗೆ ಕರೆಸಲಾಗಿತ್ತು.

ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ನಂತರ ಪೊಲೀಸ್ ಠಾಣೆಯಲ್ಲಿ ದಂಪತಿಗೆ ಸಲಹೆ ನೀಡಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ, ತನ್ನ ಗ್ರಾಮ ಸಿಂಗ್‌ಪುರ ತಲುಪಿದ ನಂತರ, ದೀಪಕ್ ರಾಮ್, ಆತನ ತಂದೆ ಶಿವಪೂಜನ್ ರಾಮ್ ಹಾಗೂ  ಇತರ ಮೂವರು ಕುಟುಂಬ ಸದಸ್ಯರು ಮಹಿಳೆಯನ್ನು ತಮ್ಮ ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.

ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದೆ ಎಂದು ರೋಹ್ತಾಸ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರ್ತಿ ತಿಳಿಸಿದ್ದಾರೆ.

"ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ಪತಿ ಹಾಗೂ ಮಾವ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ" ಎಂದು ಭಾರ್ತಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News