ಉತ್ತರಪ್ರದೇಶ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಕೃತ್ಯದ ವೀಡಿಯೊ ವೈರಲ್
ಶಹಜಹಾನ್‌ಪುರ (ಉತ್ತರಪ್ರದೇಶ): ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ 30 ವರ್ಷದ ಮಹಿಳೆಯ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಅತ್ಯಾಚಾರಿಗಳು ಕೃತ್ಯವನ್ನು ಚಿತ್ರೀಕರಿಸಿ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.
ಎಪ್ರಿಲ್ 22 ರಂದು ಐವರು ತನ್ನನ್ನು ತನ್ನ ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಶನಿವಾರದಂದು ಸಾಮೂಹಿಕ ಅತ್ಯಾಚಾರದ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜಯ್ ಕುಮಾರ್ ಹೇಳಿದರು.
ಆರೋಪಿಗಳು ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಹಾಗೂ ಘಟನೆಯ ಒಂದು ವಾರದ ನಂತರ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದು ಅವರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.