ಶಿವಮೊಗ್ಗ: ಲಾಡ್ಜ್‌ನಲ್ಲಿ ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
Update: 2022-05-01 20:39 IST
ಶಿವಮೊಗ್ಗ, ಮೇ.01: ನಗರದ ಲಾಡ್ಜ್‌ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಬ್ಲೇಡ್‌ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಬೆಂಗಳೂರಿನ ರಾಜಾಜಿನಗರದ ಎಚ್.ಕೆ.ನರೇಂದ್ರಬಾಬು(42) ಎಂದು ಗುರುತಿಸಲಾಗಿದೆ.
ಇವರು ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ತಂಗಿದ್ದರು. ಬುಧವಾರ ಮಧ್ಯಾಹ್ನ ಊಟಕ್ಕೆಂದು ಹೊರಗಡೆ ಬಂದು ವಾಪಸ್ ಕೋಣೆಗೆ ಹೋದವರು ಹೊರಗಡೆ ಬಂದಿಲ್ಲ. ಶನಿವಾರ ಹೋಟೆಲ್ ಸಿಬ್ಬಂದಿ ಬಿಸಿ ನೀರು ಬಂದಿರುವ ವಿಚಾರ ತಿಳಿಸಲು ಹೋದಾಗ ನರೇಂದ್ರಬಾಬು ಅವರು ಪ್ರತಿಕ್ರಿಯೆ ನೀಡಿಲ್ಲ. ಕೋಣೆಯಿಂದ ವಾಸನೆ ಕೂಡ ಬರುತಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೋಣೆಯ ಬಾಗಿಲು ತೆರೆದು ನೋಡಿದಾಗ ಬ್ಲೇಡ್‌ನಿಂದ ಕೈ ಕೊಯ್ದುಕೊಂಡು ರಕ್ತದ ಮಡುವಿನಲ್ಲಿಬಿದ್ದಿದ್ದರು ಎಂದು ತಿಳಿದು ಬಂದಿದೆ.
ಸಾವಿಗೆ ಹಣಕಾಸಿನ ಸಮಸ್ಯೆ ಇರಬಹುದು ಎಂದು ಹೇಳಲಾಗಿದ್ದು, ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.