ಅಂಬಲಪಾಡಿ: ಯಕ್ಷಗಾನ ಶಿಬಿರ ಸಮಾರೋಪ
ಉಡುಪಿ : ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ ಆಶ್ರಯದಲ್ಲಿ 18 ದಿನ ಕಾಲ ಜರಗಿದ ಯಕ್ಷಗಾನ ಶಿಬಿರದ ಸಮಾರೋಪ ಮೇ ೧ರಂದು ಅಂಬಲಪಾಡಿ ಶ್ರೀಜನಾರ್ದನ ಮಂಟಪದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಎಲ್.ಐ.ಸಿ. ಅಧಿಕಾರಿ ಎಸ್.ಕೆ.ಆನಂದ್ ವಹಿಸಿದ್ದರು. ರಂಗಭೂಮಿಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಉದ್ಯಮಿ ವಿಶ್ವನಾಥ ಶೆಣೈ, ನಾರಾಯಣ ಎಂ.ಹೆಗಡೆ ಭಾಗವಹಿದ್ದರು.
ಮಂಡಳಿಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಸ್ವಾಗತಿದರು. ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ನಟರಾಜ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ತೆಂಕಿಲ್ಲಾಯ ವಂದಿಸಿದರು.
ಉಪಾಧ್ಯಕ್ಷ ಕೆ.ಜೆ.ಗಣೇಶ್, ಕಾರ್ಯದರ್ಶಿ ಸುನಿಲ್ ಕುಮಾರ್, ಪ್ರವೀಣ್ ಉಪಾಧ್ಯಾಯ, ಪ್ರಕಾಶ್ ಹೆಬ್ಬಾರ್ ಉಪಸ್ಥಿತರಿದ್ದರು. ನರಸಿಂಹ ತುಂಗರ ನಿರ್ದೇಶನದಲ್ಲಿ ಏರ್ಪಟ್ಟ ಶಿಬಿರದಲ್ಲಿ ೪೦ ವಿದ್ಯಾರ್ಥಿಗಳು ಪಾಲ್ಗೊಂಡಿ ದ್ದರು. ಸಭೆಯ ಪೂರ್ವದಲ್ಲಿ ಶಿಬಿರಾರ್ಥಿಗಳಿಂದ ಪ್ರಾತ್ಯಕ್ಷಿಕೆ ನಡೆಯಿತು.