×
Ad

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ: ಬಿ.ಎಸ್ ಯಡಿಯೂರಪ್ಪ

Update: 2022-05-02 11:58 IST
 ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ: 'ರಾಜ್ಯದಲ್ಲಿ  ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ಈಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಟಿಕೆಟ್ ನೀಡುವ ಕುರಿತು ನಾನು ಚರ್ಚೆ ಮಾಡುವುದಕ್ಕೆ ಹೋಗುವುದಿಲ್ಲ. ಅದೆಲ್ಲ ಕೇಂದ್ರದ ನಾಯಕರಿಗೆ ಬಿಟ್ಟಿರುವ ವಿಚಾರ ಎಂದು ತಿಳಿಸಿದರು.

ಪಕ್ಷ ಸಂಘಟನೆಯ ಉದ್ದೇಶದಿಂದ ಈಗಾಗಲೇ ರಾಜ್ಯ ಪ್ರವಾಸ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಜಿಲ್ಲೆಗಳಿಗೆ ತೆರಳಿ ಅಲ್ಲಿನ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿ ಪ್ರತೀ ಬೂತ್ ಗಳನ್ನು ಬಳಪಡಿಸಿ ಬೂತ್ ಗೆದ್ದರೆ, ಇಡೀ ರಾಜ್ಯ ಗೆದ್ದಂಗೆ ಆಗುತ್ತದೆ. ಈ  ನಿಟ್ಟಿನಲ್ಲಿ  ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. 

'ನಾಯಕತ್ವ ಬದಲಾವಣೆಯೇ ಬಿಜೆಪಿ ಶಕ್ತಿ' ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News