×
Ad

ಮಂಗಳೂರು: ಮೇ 4ರಂದು ಬಿಸಿಯೂಟ ನೌಕರರ ಪ್ರತಿಭಟನೆ

Update: 2022-05-02 19:04 IST

ಮಂಗಳೂರು : ಮಧ್ಯಾಹ್ನದ ಬಿಸಿಯೂಟ ಯೋಜನೆಯು ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲು ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತಮ್ಮ ಕರ್ತವ್ಯ ನಿರ್ವಸಿಕೊಂಡು ಬಂದಿರುವ ಅಡುಗೆಯವರನ್ನು 60 ವರ್ಷ ವಯೋಮಾನದ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮವನ್ನು ಖಂಡಿಸಿ ಅಕ್ಷರದಾಸೋಹ ನೌಕರರ ಸಂಘ (ಸಿಐಟಿಯು ಸಂಯೋಜಿತ)ವು ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟನೆ ತಿಳಿಸಿದೆ.

ಮೇ 4ರಂದು ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರದ ಶಾಸಕರ ಕಚೇರಿ (ಮಂಗಳೂರು ಮನಪಾ ಮುಂದೆ) ಮತ್ತು ಮೇ 5,6,7ರಂದು ಜಿಲ್ಲೆಯ ಉಳಿದ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು. ಬಳಿಕ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್‌ಗೆ ಮನವಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News