×
Ad

ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ: ಶಾಸಕ ಪ್ರಿಯಾಂಕ್ ಖರ್ಗೆ

Update: 2022-05-02 21:06 IST

ಮೈಸೂರು,ಮೇ.2: ಬಿಟ್ ಕಾಯಿನ್ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಚಾರ್ಜ್ ಆದ ಮೇಲೆ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಅಂದು ಮತ್ತು ಇಂದು ಹೇಳುತ್ತಿದ್ದೇನೆ, ಬಿಟ್ ಕಾಯಿನ್ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಹೇಳಿದರು.

ಪಿಎಸ್‍ಐ ಪರೀಕ್ಷೆ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ತನಿಖೆ ಕಲಬುರಗಿಗೆ ಮಾತ್ರ ಸೀಮಿತವಾಗಬಾರದು. ಸರ್ಕಾರ ಸೂಕ್ತ ತನಿಖೆ ನಡೆಸದೆ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಕೇವಲ ಒಂದೇ ಪರೀಕ್ಷಾ ಕೇಂದ್ರದ ವಿರುದ್ಧ ಎಫ್ ಐಆರ್ ಮಾಡಿದ್ದಾರೆ. ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೂ ತನಿಖೆಯಾಗಬೇಕು. ಈ ಕುರಿತು ಪರೀಕ್ಷಾ ಅಭ್ಯರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ತನಿಖೆ ಮಾತ್ರ ನಡೆಯುತ್ತಿಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News