ಉಗ್ರಗಾಮಿ ಚಟುವಟಿಕೆ ಆರೋಪ ಹೊತ್ತ ಪ್ರಕರಣ: ಸಲೀಂ ಖಾನ್‍ಗೆ ಜಾಮೀನು ಮಂಜೂರು
Update: 2022-05-02 22:21 IST
ಬೆಂಗಳೂರು, ಮೇ 2: ಉಗ್ರಗಾಮಿ ಚಟುವಟಿಕೆ ಆರೋಪ ಹೊತ್ತ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ(ಎನ್‍ಐಎ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಸಲೀಂ ಖಾನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.
ಜಾಮೀನು ಕೋರಿ ಸಲೀಂ ಖಾನ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಸಲೀಂ ಖಾನ್ ಅಲ್-ಹಿಂದ್ ಸಂಘಟನೆ ಸದಸ್ಯ ಎನ್ನಲಾಗಿದ್ದು, ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗಿ, ಕೆಲ ಸದಸ್ಯರಿಗೆ ಆಶ್ರಯ ಕಲ್ಪಿಸಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಯುಎಪಿಎ ಕಾಯ್ದೆಯ ಸೆಕ್ಷನ್ 2(ಕೆ) ಅಥವಾ 2(ಎಂ) ಅಡಿ ಅಪರಾಧ ಕೃತ್ಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಆರೋಪಿಗೆ ಜಾಮೀನು ನೀಡಿ ಆದೇಶಿಸಿದೆ.