×
Ad

ಮೇ 5ಕ್ಕೆ ಸೌಹಾರ್ದ ಸಂಸ್ಕೃತಿ ಸಮಾವೇಶ

Update: 2022-05-02 22:26 IST

ಬೆಂಗಳೂರು, ಮೇ 2: ರಾಜ್ಯದಲ್ಲಿ ಹದಗೆಟ್ಟಿರುವ ಸೌಹಾರ್ದತೆಯನ್ನು ಪುನಾರ್ ಸ್ಥಾಪಿಸಲು ನಗರದ ಅಂಬೇಡ್ಕರ್ ಭವನದಲ್ಲಿ ಮೇ 5ರಂದು ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‍ವಾದ)ದ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ತಿಳಿಸಿದರು.

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಸೌಹಾರ್ದ ಸಂಸ್ಕೃತಿ ಸಮಾವೇಶದಲ್ಲಿ ಧರ್ಮಗುರು ಹಾಗೂ ಸಂವಿಧಾನ ತಜ್ಞರು ಭಾಗವಹಿಸಿ ಪ್ರಮುಖ ವಿಷಯಗಳನ್ನು ಚರ್ಚಿಸಲಿದ್ದಾರೆ. ಪರ ವಿರೋಧಗಳನ್ನು ಮೀರಿ ಕದಡಿದ ವಾತಾವರಣವನ್ನು ತಿಳಿಗೊಳಿಸಲು ಆಶಯದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಆರ್. ಮೋಹನ್ ರಾಜ್, ಎಸ್.ವೈ. ಗುರುಶಾಂತ್, ಎ. ಜ್ಯೋತಿ, ನಿಸಾರ್ ಅಹ್ಮದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News