ಬೆಂಗಳೂರು: ನೃಪತುಂಗ ವಿಶ್ವ ವಿದ್ಯಾಲಯ ಉದ್ಘಾಟಿಸಿದ ಗೃಹ ಸಚಿವ ಅಮಿತ್ ಶಾ
Update: 2022-05-03 11:13 IST
ಬೆಂಗಳೂರು, ಮೇ 3: ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಮಂಗಳವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಪಿ.ಸಿ. ಮೋಹನ್, ರಾಜ್ಯ ಪೋಲಿಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನೃಪತುಂಗ ವಿ.ವಿ.ದಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಶಿಸ್ತುಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ಈ ವಿ.ವಿ.ಗೆ ಕೇಂದ್ರ ಸರಕಾರವು 55 ಕೋಟಿ ರೂ.ಗಳಷ್ಟು ಅನುದಾನವನ್ನು ಮಂಜೂರು ಮಾಡಿದೆ.