×
Ad

ಮಂಗಳೂರು: ಬಸವೇಶ್ವರರ ಜಯಂತಿ ಆಚರಣೆ

Update: 2022-05-03 20:03 IST

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ನಗರದ ತುಳು ಭವನದಲ್ಲಿ ಮಂಗಳವಾರ ಭಕ್ತಿ ಭಂಡಾರಿ, ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು  ಆಚರಿಸಲಾಯಿತು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಗಿರಿ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಾ. ಕೆ.ಎಸ್. ಜಯಪ್ಪ, ಸಂಘದ ಪದಾಧಿ ಕಾರಿಗಳು ಮಹಾತ್ಮ ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ, ಗೌರವ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ.  ಜಿ.ರಾಜೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿ ಕಾರಿಗಳು, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಈ ಸಂದರ್ಭ  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸುರತ್ಕಲ್ ನ ಎನ್ಐಟಿಕೆಯ ನಿರ್ದೇಶಕ ಉದಯ ಕುಮಾರ್ ಆರ್ ಯರಗಟ್ಟಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News