×
Ad

ಅಮಿತ್ ಶಾ ಜೊತೆ ಬಿಜೆಪಿ ನಾಯಕರ ಬೆಳ್ಳಿ ತಟ್ಟೆ ಊಟ: ಕಾಂಗ್ರೆಸ್ ಹೇಳಿದ್ದೇನು?

Update: 2022-05-03 20:51 IST
photo: @INCKarnataka
 

ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಆಯೋಜಿಸಿದ್ದ ಭೋಜನಕೂಟದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದೆ. 

'ಪ್ರತಿ ಸರ್ಕಾರಿ ನೇಮಕಾತಿಯಲ್ಲಿ ಪ್ರತಿ ಸರ್ಕಾರಿ ವರ್ಗಾವಣೆಯಲ್ಲಿ ಪ್ರತಿ ಸರ್ಕಾರಿ ಗುತ್ತಿಗೆಯಲ್ಲಿ 40% ಕಮಿಷನ್ ಪಡೆದು, ಇಡೀ ರಾಜ್ಯವನ್ನ ಲೂಟಿ ಮಾಡಿ, ರಾಜ್ಯದ ಸಂಪನ್ಮೂಲಗಳನ್ನ ಗುಡುಸಿ ಗುಂಡಾಂತರ ಮಾಡಿದ ಆದಾಯದಲ್ಲಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವೆಯುವವರಿಗೆ, ಭಾರತ ಹಸಿವು ಸೂಚಂಕ್ಯದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣೋದು ಹೇಗೆ?' ಎಂದು ಪ್ರಶ್ನಿಸಿದೆ. 

'ನಿಮ್ಮ ಕರ್ನಾಟಕದ ಭೇಟಿಯ ಅಜೆಂಡಾ ಏನು? PSI ಪರೀಕ್ಷೆ ಅಕ್ರಮವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವುದೇ? ಬಿಟ್ ಕಾಯಿನ್ ಹಗರಣದ ತನಿಖೆಯನ್ನ ಚುರುಕುಗೊಳಿಸುವುದಕ್ಕಾ? ಕುಸಿದು ಕುಳಿತಿರುವ ರಾಜ್ಯದ ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸುವುದಕ್ಕಾ? ಅಸಮರ್ಥ ಗೃಹಮಂತ್ರಿಯನ್ನು ಬದಲಿಸುವುದಕ್ಕಾ? ಅಥವಾ ಸಿಎಂ ಬದಲಾವಣೆಗಾ?' ಎಂದು ಅಮಿತ್ ಶಾ ಅವರಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News