×
Ad

ರಾಜಕೀಯ ನಿವೃತ್ತಿ ಪಡೆದು ಶೀಘ್ರದಲ್ಲೇ ಸನ್ಯಾಸ ದೀಕ್ಷೆ ಪಡೆಯುವೆ: ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ

Update: 2022-05-03 22:50 IST

ಬೆಂಗಳೂರು: 'ರಾಜಕೀಯ ಜೀವನದಿಂದ ನಿವೃತ್ತಿ ಪಡೆದು ಶೀಘ್ರದಲ್ಲೇ ಸನ್ಯಾಸ ದೀಕ್ಷೆ ಪಡೆಯುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ, ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ತಿಳಿಸಿದ್ದಾರೆ. 

ಮಂಗಳವಾರ ನಗರದ ಚಿತ್ರಕಲಾ ಪರಿಷತ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,  ‘ರಾಜರಾಜೇಶ್ವರಿ ದೇವಸ್ಥಾನದ ಕೈಲಾಸ ಮಠದ ಜಯೇಂದ್ರ ತೀರ್ಥಪುರಿ ಸ್ವಾಮೀಜಿ ಅವರಿಂದ ದೀಕ್ಷೆ ಸ್ವೀಕರಿಸಲಿದ್ದೇನೆ’ ಎಂದು ಅವರು ಹೇಳಿದರು.

'ನಾನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏಪ್ರಿಲ್ 30ರಂದು ರಾಜೀನಾಮೆ ನೀಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಸಣ್ಣ ಕಪ್ಪುಚುಕ್ಕೆ ಇಲ್ಲದಂತೆ ಕೆಲಸ ಮಾಡಿರುವ ಆತ್ಮ ತೃಪ್ತಿಯಲ್ಲಿ ನಾನು ನಿವೃತ್ತಿಯನ್ನು ಹೊಂದುತ್ತಿದ್ದೇನೆ' ಎಂದು ತಿಳಿಸಿದರು.

ಮೇ 15ರಂದು  ಪಟ್ಟಾಭಿಷೇಕ ಕಾರ್ಯಕ್ರಮ  ಮುಖ್ಯ ನಡೆಯಲಿದ್ದು,  ಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಸಚಿವರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News