ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಜಾಮೀನು
Update: 2022-05-04 11:46 IST
ಮುಂಬೈ: ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸವಾದ ಬಾಂದ್ರಾದಲ್ಲಿನ (ಪೂರ್ವ) ಮಾತೋಶ್ರೀ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸುವ ಉದ್ದೇಶವನ್ನು ಘೋಷಿಸಿದ್ದಕ್ಕಾಗಿ ರಾಣಾ ದಂಪತಿ ವಿರುದ್ಧ ಖಾರ್ ಪೊಲೀಸ್ ಠಾಣೆ ಅಧಿಕಾರಿಗಳು ಎಪ್ರಿಲ್ 23 ರಂದು ದೇಶದ್ರೋಹ ಹಾಗೂ ಸೌಹಾರ್ದದ ಉಲ್ಲಂಘನೆಯ ಆರೋಪದಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ರಾಣಾ ದಂಪತಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಲು ನಿರ್ಧರಿಸಿದನ್ನು ಖಂಡಿಸಿ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.