ವಿಟ್ಲ: ಹತ್ತನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ
Update: 2022-05-04 15:00 IST
ಬಂಟ್ವಾಳ, ಮೇ 4: ಹತ್ತನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಈಕೆ ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರುನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಲಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.