×
Ad

ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಪ್ರಭಾವಿಗಳ ಕೈವಾಡದ ಬಗ್ಗೆ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಪತ್ರ

Update: 2022-05-04 19:52 IST
ಫೈಲ್ ಚಿತ್ರ

ಬೆಂಗಳೂರು, ಮೇ 4: ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ರಾಷ್ಟ್ರೀಯ ಪಕ್ಷದ ಪ್ರಭಾವಿ ಮುಖಂಡರು ಸೇರಿದಂತೆ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಅಕ್ರಮದಲ್ಲಿ ತೊಡಗಿರುವ ತನಿಖೆಯ ದಿಕ್ಕು ತಪ್ಪುವ ಸಾಧ್ಯತೆ ಇದೆ. ಮರು ಪರೀಕ್ಷೆಯ ನೆಪದಲ್ಲಿ ಅಕ್ರಮವನ್ನು ಮುಚ್ಚಿಹಾಕುವ ಪ್ರಯತ್ನಗಳು ನಡೆಯುತ್ತಿವೆ. ಹಾಗಾಗಿ ಉಚ್ಚನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸಾಮಾಜಿಕ ಕಾರ್ಯಕರ್ತ ಎನ್. ಹನುಮೇಗೌಡ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 

ನಾಡಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಪಾಲಿಸಬೇಕಾದ ಪೊಲೀಸ್ ಇಲಾಖೆಯಲ್ಲಿ ಹುದ್ದೆಗಳಿಗೆ 70 ರಿಂದ 80 ಲಕ್ಷ ರೂ.ಗಳ ಭ್ರಷ್ಟಾಚಾರ ನಡೆದಿರುವುದು ಖಂಡನಾರ್ಹವಾದದು. ಗೃಹ ಸಚಿವರೊಂದಿಗೆ ಗುರುತಿಸಿಕೊಂಡಿದ್ದ ಪಕ್ಷದ ಜಿಲ್ಲಾ ಪದಾಧಿಕಾರಿಗಳೆ ಅಕ್ರಮದ ಸೂತ್ರದಾರರಾಗಿದ್ದಾರೆ. ಆಡಳಿತ ಪಕ್ಷದ ಪದಾಧಿಕಾರಿಗಳಿಗೂ ಅಕ್ರಮದ ನಂಟು ಇರುವಂತೆ ವರದಿಯಾಗುತ್ತಿದೆ. ಹಾಗಾಗಿ ತನಿಖೆಯ ದಿಕ್ಕು ತಪ್ಪದಂತೆ ಎಚ್ಚರ ವಹಿಸುವಂತೆ ಅವರು ಉಲ್ಲೇಖಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News