ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
Update: 2022-05-04 19:58 IST
ಬೆಂಗಳೂರು, ಮೇ 4: ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ(ಸಿಆರ್‍ಇ ಸೆಲ್)ದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರನ್ನು ಬೆಂಗಳೂರಿನ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಎಡಿಜಿಪಿ ಅರುಣ್ ಚಕ್ರವರ್ತಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಹಾಗೂ ತರಬೇತಿ ವಿಭಾಗದ ಎಡಿಜಿಪಿಯಾಗಿದ್ದ ಹರಿಶೇಖರನ್ ಪಿ. ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗಕ್ಕೆ ನಿಯೋಜನೆ ಮಾಡಿ ಆದೇಶಿಸಲಾಗಿದೆ.